131
ದೇವಾಲಯಕ್ಕೆ ಹೋಗುವಾಗ ಹಾಡುವ ಗೀತೆ.
1 ಯೆಹೋವನೇ, ನನ್ನ ಹೃದಯದಲ್ಲಿ ಗರ್ವವಿಲ್ಲ.
ನನ್ನ ಕಣ್ಣುಗಳಲ್ಲಿ ಸೊಕ್ಕಿಲ್ಲ.
ಮಹಾಕಾರ್ಯಗಳನ್ನಾಗಲಿ ಅಸಾಧ್ಯ ಕಾರ್ಯಗಳನ್ನಾಗಲಿ
ಮಾಡಲು ನಾನು ಪ್ರಯತ್ನಿಸುವುದಿಲ್ಲ.
2 ನಾನು ಸಮಾಧಾನದಿಂದಿರುವೆ. ನನ್ನ ಆತ್ಮವು ನೆಮ್ಮದಿಯಿಂದಿದೆ.
ತನ್ನ ತಾಯಿಯ ತೋಳುಗಳಲ್ಲಿ ಸಂತೃಪ್ತಿಯಾಗಿರುವ ಮಗುವಿನಂತೆ
ನನ್ನ ಆತ್ಮವು ಸಮಾಧಾನದಿಂದಲೂ ನೆಮ್ಮದಿಯಿಂದಲೂ ಇದೆ.
3 ಇಸ್ರೇಲೇ, ಯೆಹೋವನಲ್ಲಿ ಭರವಸವಿಡು.
ಈಗಲೂ ಆತನಲ್ಲಿ ಭರವಸವಿಡು.
ಎಂದೆಂದಿಗೂ ಆತನಲ್ಲಿ ಭರವಸವಿಡು!